ಭಾರತ, ಮೇ 14 -- ಖ್ಯಾತ ಗಾಯಕ ಸೋನು ನಿಗಮ್ ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ನ ಮೆಟ್ಟಿಲೇರಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.
ಏಪ್ರಿಲ್ 22 ರಂದು ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ನೀಡಿದ ಹೇಳಿಕೆಯು ಅನೇಕ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿತ್ತು. ಇದಾದ ಬಳಿಕ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ವಿವಾದ ಭುಗಿಲೆದ್ದಿತು.
ಸೋನು ನಿಗಮ್ ವಿರುದ್ಧೆ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕೈಬಿಡುವಂತೆ ಕೋರಿ ಕರ್ನಾಟಕದ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬೆಂಗಳೂರು ಪೊಲೀಸರು ನಿಗಮ್ಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಿದ್ದರು. ಸೋನು ನಿಗಮ್ ಪ್ರತಿಕ್ರಿಯೆ ನೀಡಲು ವಿಫಲವಾದ ಕಾರಣ, ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಒತ್ತಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.