Bangalore, ಮೇ 2 -- ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರವೂ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಮೈಸೂರು ಸೇರಿ ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಗುರುವಾರವೂ ಉತ್ತಮ ಮಳೆಯಾಗಿದ್ದು, ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಲಕ್ಷಣಗಳಿವೆ. ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಬೀದರ್, ವಿಜಯಪುರ ಸಹಿತ ಪ್ರಮುಖ ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಇದರ ನಡುವೆಯೂ ಧಾರವಾಡ, ಕಲಬುರಗಿ ಸಹಿತ ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ದೈನಂದಿನ ತಿಳಿಸಿದೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.