ಭಾರತ, ಮೇ 28 -- ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ 'ನಂದಗೋಕುಲ' ಎಂಬ ವಿನೂತನ ಧಾರಾವಾಹಿಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ'ಯನ್ನು ಹೇಳುವ, ಈ ಬಹುನಿರೀಕ್ಷಿತ ಧಾರಾವಾಹಿ 'ನಂದಗೋಕುಲ' ಜೂನ್4 ಬುಧವಾರ ದಿಂದ ರಾತ್ರಿ 9ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.
ನಂದಕುಮಾರ್ ಒಬ್ಬ ಅನಾಥ. ಕಟ್ಟುನಿಟ್ಟಾದ ನಡವಳಿಕೆಯ ಆತ್ಮವಿಶ್ವಾಸವೇ ತುಂಬಿದ ಛಲಗಾರ. 25 ವರ್ಷಗಳ ಹಿಂದೆ ಸೂರ್ಯಕಾಂತ್ - ಚಂದ್ರಕಾಂತ್ ಸಹೋದರರ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುತ್ತಾನೆ. ಸಹೋದರರ ಏಕೈಕ ತಂಗಿ ಗಿರಿಜಾಳನ್ನು ಪ್ರೀತಿಸಿ ಅವರ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗುತ್ತಾನೆ. ಸಹೋದರರಿಗೆ ತಮ್ಮ ಅಂತಸ್ತಿನವನಲ್ಲ ಅನ್ನಿಸಿ ಅವರಿಬ್ಬರನ್ನು ಹೊರ ಹಾಕುತ್ತಾರೆ. ನಂದಕುಮಾರ್ ಅವರ ಅಂತಸ್ತಿಗೆ ತಕ್ಕಂತೆ ಬೆಳೆಯುವ ಹಟದಿಂದ 'ಗಿರಿಜಾ ಸ್ಟೋರ್ಸ್' ಎಂಬ ದಿನಸಿ ಅಂಗಡಿಯನ್ನು ತೆರೆದು ಯಶಸ್ವಿಯಾಗುತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.