ಭಾರತ, ಮೇ 14 -- ಮಂಗಳೂರು: ಕರ್ನಾಟಕ ಬ್ಯಾಂಕಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನಿವೃತ್ತಿಯಾಗಿದ್ದ ನಂದಳಿಕೆ ಬಾಲಚಂದ್ರ ರಾವ್ (72) ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.
ನಂದಳಿಕೆ ಮುದ್ದಣ ಸ್ಮಾರಕ ಮಿತ್ರಮಂಡಳಿಯ ಸ್ಥಾಪಕರಲ್ಲಿ ಓರ್ವರಾದ ನಂದಳಿಕೆ ಬಾಲಚಂದ್ರ ರಾವ್ ಅವರ ಅಂತಿಮ ದರ್ಶನ ನಾಳೆ (ಮೇ 15) ಗುರುವಾರ ಬೆಳಿಗ್ಗೆ 6ರಿಂದ ಬೆಳಿಗ್ಗೆ ಹತ್ತು ಗಂಟೆಯವರೆಗೆ ಮಂಗಳೂರಿನ ಬಿಜೈನ ಚೌಟಾಸ್ ಕಂಪೌಡಿನಲ್ಲಿರುವ ಅವರ ಸ್ವಗೃಹದಲ್ಲಿರುತ್ತದೆ. ನಂತರ ಕಾರ್ಕಳ ತಾಲೂಕಿನ ನಂದಳಿಕೆಯ ಐಸಿರಿ ಮನೆಯಲ್ಲಿ ಅಂತಿಮ ದರ್ಶನ ವ್ಯವಸ್ಥೆಯಾಗಿದೆ. ಬಳಿಕ ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.
ಅವರು ಕವಿ ಮುದ್ದಣನ ಹುಟ್ಟೂರಾದ ನಂದಳಿಕೆಯಲ್ಲಿ ಮುದ್ದಣ ಸ್ಮಾರಕ ಮಿತ್ರಮಂಡಲಿ ಸ್ಥಾಪನೆ ಮಾಡಿ ಅದರ ಮೂಲಕ ಕವಿಯನ್ನು ನೆನಪಿಸುವ ನೂರಾರು ಕಾರ್ಯಕ್ರಮಗಳನ್ನು, ಕೆಲಸಗಳನ್ನು ಕಾರ್ಕಳದ ನಂದಳಿಕೆ ಗ್ರಾಮದಲ್ಲಿ ಮಾಡಿದರು. ಕವಿ ಮುದ್ದಣನ ಸಮಗ್ರ ಕಾವ್ಯ ಸಂಪುಟ ಬಿಡುಗಡೆ, ಮುದ್ದಣ ಮನೋರಮೆಯರ ಸಂಭಾಷಣೆಯ ಡಿವಿಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.