ಭಾರತ, ಮಾರ್ಚ್ 4 -- ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ ಅವರ ದೇಹದ ತೂಕ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್‌ ಅವರ ಹೇಳಿಕೆ ಭಾರಿ ವಿವಾದಕ್ಕೆ ಗುರಿಯಾಗಿದೆ. ರೋಹಿತ್‌ ಶರ್ಮಾ ದಪ್ಪಗಿದ್ದಾರೆ ಎಂದು ಹೇಳಿದ್ದ ಕೈ ನಾಯಕಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಸೇರಿದಂತೆ, ಕ್ರಿಕೆಟ್ ಅಭಿಮಾನಿಗಳು ಕೂಡಾ ಕಾಂಗ್ರೆಸ್ ನಾಯಕಿಯನ್ನು ತರಾಟೆ ತೆಗೆದುಕೊಂಡಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ, ಭಾರತ ಕ್ರಿಕೆಟ್ ತಂಡವು ಇಂದು (ಮಾ.4) ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಕೊನೆಯದಾಗಿ ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ಆಡಿದ್ದ ಹಿಟ್‌ಮ್ಯಾನ್‌ 17 ಎಸೆತಗಳಲ್ಲಿ 15 ರನ್ ಮಾತ್ರ ಗಳಿಸಿದ್ದರು. ಆ ಬಳಿಕ ಕಾಂಗ್ರೆಸ್ ವಕ್ತಾರೆ ಎಕ್ಸ್‌ ಮೂಲಕ ರೋಹಿತ್‌ ಶರ್ಮಾ ಕುರಿತ ಪೋಸ್ಟ್ ಹಂಚಿಕೊಂಡಿದ್ದಾರೆ. ಕ್ರಿಕೆಟಿಗ ರೋಹಿತ್​ ದಪ್ಪ ಇದ್ದು, ಪರಿಣಾಮಕಾರಿ ನಾಯಕ ಅಲ್ಲ ಎಂದು ಅವರು ಬರೆದುಕೊಂಡಿದ್ದಾರೆ. ಇದು ವಿವಾ...