ಭಾರತ, ಫೆಬ್ರವರಿ 18 -- ಕಾರವಾರ ನೌಕಾನೆಲೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರನ್ನು ಎನ್​ಐಎ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ಕಳುಹಿಸಿದ ಆರೋಪದ ಮೇಲೆ ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ್ ಹಾಗೂ ಅಂಕೋಲಾದ ಹಳವಳ್ಳಿಯ ಅಕ್ಷಯ್ ನಾಯ್ಕ್ ಎಂಬವರನ್ನು ಹೈದರಾಬಾದ್ ಮೂಲದ ರಾಷ್ಟ್ರೀಯ ತನಿಖಾ ದಳದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾಹಿತಿ ಸೋರಿಕೆ ಕುರಿತು ಮಾಹಿತಿ ಪಡೆದ ಎನ್​ಐಎ ತಂಡ, ಸೋಮವಾರವೇ (ಫೆ.17) ಕಾರವಾರಕ್ಕೆ ಬಂದಿತ್ತು. ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ ತಂಡ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ 2024ರ ಆಗಸ್ಟ್ ತಿಂಗಳಲ್ಲಿ ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ ಮೂವರ ವಿಚಾರಣೆ ನಡೆಸಿದ್ದ ಎನ್​ಐಎ ಪೊಲೀಸರು ನೋಟೀಸ್ ನೀಡಿ ಬಿಟ್ಟಿದ್ದರು. ಅವರಲ್ಲಿ ತಾಂಡೇಲ್ ಮತ್ತು ಅಕ್ಷಯ್ ಕೂಡಾ ಇದ್ದರು. ಈಗ ಮತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಲು ಬಂದ ತನಿಖಾ ದಳದ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದ...