ಭಾರತ, ಮಾರ್ಚ್ 4 -- ಪ್ರತಿ ವರ್ಷದಂತೆ ಈ ಬಾರಿಯೂ ಅದ್ಧೂರಿ ಜಾತ್ರಾ ಮಹೋತ್ಸವಕ್ಕೆ ಆದಿ ಚುಂಚನಗಿರಿಯ ಮಹಾ ಸಂಸ್ಥಾನ ಸಿದ್ಧತೆಗಳನ್ನು ಆರಂಭಿಸಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾರ್ಚ್‌ 7ರಿಂದ 15ರವರೆಗೆ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, 9 ದಿನಗಳವರೆಗೆ ವಿವಿಧ ಧಾರ್ಮಿಕ ಮತ್ತು ಪೂಜಾ ಕಾರ್ಯಕ್ರಮಗಳು ನಡೆಯಲಿವೆ. 7ರಂದು ಬೆಳಿಗ್ಗೆ 6.30ಕ್ಕೆ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯವರು ಮಹಾಪೂಜೆ, ಧರ್ಮಧ್ವಜ ಸ್ಥಾಪನೆ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮೊದಲ ದಿನ ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಂದಿ ಪೂಜೆ ನಡೆಯಲಿದ್ದು, ಬೆಳಿಗ್ಗೆ 10ರ ನಂತರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಭಾ ಕಾರ್ಯಕ್ರಮಗಳು‌ ಜರುಗಲಿವೆ. ಮಾರ್ಚ್ 8 ರಂದು ಸಂಜೆ 6ಕ್ಕೆ ಸರ್ವಾಲಂಕೃತ, ಚಂದ್ರಮೌಳೀಶ್ವರಸ್ವಾಮಿ ಉತ್ಸವ , ಮಾರ್ಚ್ 9 ರಂದು ಸಂಜೆ 6ಕ್ಕೆ ಮಲ್ಲೇಶ್ವರಸ್ವಾಮಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಮಾರ್ಚ್ ...