ಭಾರತ, ಏಪ್ರಿಲ್ 22 -- ತುಮಕೂರು: ನಮ್ಮ ಜ್ಞಾನ ಹಾಗೂ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಛಾತಿಯನ್ನು ಬೆಳೆಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಶನಿವಾರ (ಏಪ್ರಿಲ್ 19) , ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದ ಕಾರಣ ಮಹಾ ಸಾಹಿತಿಯಾದ. ವಾಲ್ಮೀಕಿ ದರೋಡೆಕೋರ ಆಗಿದ್ದ. ಇಂತಹ ಮಾತುಗಳನ್ನೆಲ್ಲ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಮುಖ್...