Madikeri, ಮೇ 3 -- ಮಡಿಕೇರಿ: ಭಾರತದ ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆ ನಂತರ ಪ್ರವಾಸೋದ್ಯಮ ಚಟುವಟಿಕೆ ಬಹುತೇಕ ಸ್ಥಗಿತಗೊಂಡಿದೆ. ಸುರಕ್ಷತೆ ಕಾರಣದಿಂದ ಮೇ ತಿಂಗಳಲ್ಲಿ ಕಾಶ್ಮೀರಕ್ಕೆ ಹೋಗಬೇಕಾಗಿದ್ದ ಪ್ರವಾಸಿಗರು ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ. ಅದರಲ್ಲೂ ಕರ್ನಾಟಕದಿಂದಲೂ ಹೆಚ್ಚಿನ ಪ್ರವಾಸಿಗರು ಕಾಶ್ಮೀರದತ್ತ ಮುಖ ಮಾಡಬೇಕಿತ್ತು. ಅಲ್ಲಿನ ಚಿತ್ರಣ ಕೆಲವೇ ದಿನಗಳಲ್ಲಿ ಬದಲಾಗಿರುವ ಕಾರಣದಿಂದ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳ ಪ್ರವಾಸಿಗರು ಈಗ ನಿಧಾನವಾಗಿ ಕರ್ನಾಟಕದ ಕಾಶ್ಮೀರ ಕೊಡಗಿನತ್ತ ಮುಖ ಮಾಡತೊಡಗಿದಿದ್ದಾರೆ. ಬೇಸಿಗೆ ರಜೆ, ಸರ್ಕಾರಿ ರಜೆಗಳ ಕಾರಣದಿಂದ ಕಳೆದ ಮೂರ್ನಾಲ್ಕು ದಿನದಿಂದ ಕೊಡಗಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಈ ವಾರಾಂತ್ಯದವರೆಗೂ ಪ್ರವಾಸಿಗರ ಪ್ರಮಾಣ ಹೆಚ್ಚೇ ಇರಲಿದೆ. ಮೇ ತಿಂಗಳಲ್ಲಿ ರಜೆಗಳು ಇರುವುದರಿಂದ ಇನ್ನಷ್ಟು ಪ್ರವಾಸಿಗರು ಕೊಡಗಿನತ್ತ ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.
ಕೊಡಗು ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟು ಪ್ರತಿ ವರ್ಷ ಲಕ್ಷಾಂತರ ಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.