Bangalore, ಏಪ್ರಿಲ್ 22 -- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕನ್ನಡಿಗರು ಹತರಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ತಿಳಿದು ಕರ್ನಾಟಕದ ಸಿಎ ಸಿದ್ದರಾಮಯ್ಯ ಸಚಿವರು ಹಾಗೂ ಅಧಿಕಾರಿಗಳ ತಂಡ ತೆರಳುವಂತೆ ಸೂಚಿಸಿದ್ದಾರೆ. ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳ ತಂಡ, ಕರ್ನಾಟಕದ ವಿವಿಧ ಇಲಾಖೆಗಳ ತಂಡಗಳು ತೆರಳಲಿವೆ. ಅಲ್ಲದೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಇದರ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಚಿವ ಸಂತೋಷ್‌ ಲಾಡ್‌ ಕೂಡ ಬುಧವಾರ ಬೆಳಿಗ್ಗೆಯಿಂದಲೇ ಕಾಶ್ಮೀರದಲ್ಲಿ ಕನ್ನಡಿಗರ ರಕ್ಷಣೆಗೆ ಕಾರ್ಯಾಚರಣೆ ನಡೆಸುವರು. ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗ...