Srinagar, ಏಪ್ರಿಲ್ 22 -- ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕೆಲ ತಿಂಗಳಿನಿಂದ ತಗ್ಗಿದ್ದ ಉಗ್ರರ ಉಪಟಳ ಮತ್ತೆ ಶುರುವಾಗಿದ್ದು, ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಇದರಲ್ಲಿ ಕರ್ನಾಟಕದ ಶಿವಮೊಗ್ಗದ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯು ಹತರಾಗಿದ್ದಾರೆ. ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಬೈಸರನ್ ನಲ್ಲಿ ಗುಂಪಾಗಿ ಊಟ ಮಾಡುತ್ತಿದ್ದ ಪ್ರವಾಸಿಗರ ಮೇಲೆ ದಾಳಿ ನಡೆದಿದ್ದು ಈ ವೇಳೆ ಐವರು ಮೃತಪಟ್ಟು 20 ಜನರಿಗೆ ಗಾಯವಾಗಿದೆ; ಎಲ್ ಇ ಟಿ ಶಾಖೆಯು ಹೊಣೆ ಹೊತ್ತಿದೆ.ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ನಲ್ಲಿ ಪ್ರವಾಸಿಗರ ಗುಂಪೊಂದು ಭಯೋತ್ಪಾದಕರ ದಾಳಿಗೆ ಒಳಗಾಗಿದೆ ಎಂದು ವರದಿಯಾಗಿದೆ. ಭಯೋತ್ಪಾದಕ ದಾಳಿಯಲ್ಲಿ 5 ಪ್ರವಾಸಿಗರು ಸಾವನ್ನಪ್ಪಿದ್ದಾರೆ, 20 ಜನರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾ...