Chamarajnagar, ಏಪ್ರಿಲ್ 24 -- ಚಾಮರಾಜನಗರ:ಎರಡು ದಿನದ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯ ನಂತರ ಎಚ್ಚೆತ್ತಿರುವ ಕರ್ನಾಟಕ ಸರ್ಕಾರವೂ ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ.ಹುಬ್ಬಳ್ಳಿ ಸಹಿತ ವಿವಿಧ ನಗರಗಳು, ಕರ್ನಾಟಕದ ಭಾಗದಲ್ಲಿ ನೆಲೆಸಿರುವ ವಿದೇಶಿಯವರ ವೀಸಾ ಅವಧಿ ಮುಗಿದಿದ್ದರೆ ಕೂಡಲೇ ಅವರನ್ನು ಆಯಾ ದೇಶಗಳಿಗೆ ವಾಪಸ್‌ ಕಳುಹಿಸಲು ಇಲ್ಲವೇ ಕಾನೂನು ರೀತಿ ಕ್ರಮ ವಹಿಸುವಂತೆ ಸೂಚನೆಯನ್ನು ಪೊಲೀಸ್‌ ಅಧಿಕಾರಿಗಳಿಗೆ ನೀಡಲಾಗಿದೆ. ಈ ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ಕರ್ನಾಟಕದ ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಲ್ಲಿ ಆಯೋಜನೆಗೊಂಡಿರುವ ವಿಶೇಷ ಸಚಿವ ಸಂಪುಟ ಸಭೆಗೆ ಆಗಮಿಸಿದ...