Delhi, ಏಪ್ರಿಲ್ 23 -- ದೆಹಲಿ: ಕಾಶ್ಮೀರ ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತವು ಇದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಭಾರತ ಅಮಾನತುಗೊಳಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಮರುದಿನವೇ ಭಾರತ ಕಠಿಣ ನಿರ್ಧಾರಗಳ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ ಅಲ್ಲದೇ ಅಟ್ಟಾರಿ-ವಾಘಾ ಗಡಿಯನ್ನು ಮುಚ್ಚುವುದು, ಪಾಕಿಸ್ತಾನಿ ಪ್ರಜೆಗಳು ಭಾರತ ಪ್ರವೇಶಿಸುವುದನ್ನು ನಿಷೇಧಿಸುವುದು. ಭಾರತದಲ್ಲಿರುವ ಪಾಕಿಸ್ತಾನದ ಮಿಲಿಟರಿ ಸಲಹೆಗಾರರ ​​ಉಚ್ಚಾಟನೆ, ಹೈಕಮಿಷನ್ ಸಿಬ್ಬಂದಿ ಬಲದ ಕಡಿತವೂ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಭದ್ರತೆಯ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ಐದು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಾಗರಿಕರ ಮ...