Bangalore, ಜನವರಿ 26 -- ಬೆಂಗಳೂರು: ಗಣರಾಜ್ಯೋತ್ಸವದಂದು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಮೆರಿಕದಿಂದ ಬೆಂಗಳೂರಿಗೆ ಇಂದು ಬೆಳಗ್ಗೆ 9 ಗಂಟೆಗೆ ಆಗಮಿಸುವ ಸುದ್ದಿ ಕೇಳಿ ಶಿವಣ್ಣನನ್ನು ಸ್ವಾಗತಿಸಲು ಅಭಿಮಾನಿಗಳು, ಆತ್ಮೀಯರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಶಿವಣ್ಣ ಆಗಮಿಸಿದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇಂದು ಬೆಂಗಳೂರಿಗೆ ಶಿವಣ್ಣ ವಾಪಸ್‌ ಬರುವ ಸುದ್ದಿ ಕೇಳಿ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಆಸುಪಾಸಿನಲ್ಲಿ "ಕಿಂಗ್‌ ಈಸ್‌ ಬ್ಯಾಕ್‌ ಕೌಟೌಟ್‌ಗಳು ರಾರಾಜಿಸುತ್ತಿವೆ. ಕಟೌಟ್‌ಗಳಲ್ಲಿ ಶಿವರಾಜ್‌ ಕುಮಾರ್‌ ಜತೆ ಗೀತಾ ಶಿವರಾಜ್‌ ಕುಮಾರ್‌ ಫೋಟೋ ಕೂಡ ರಾರಾಜಿಸುತ್ತಿದೆ. ಶಿವ ರಾಜ್‌ ಕುಮಾರ್‌ ಬೆಂಗಳೂರಿಗೆ ವಾಪಸ್‌ ಬರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಅನ್ನ ಸಂತರ್ಪಣೆ ಆಯೋಜನೆ ಮಾಡಿದ್ದಾರೆ.

"ಇದು ಸ್ಯಾಂಡಲ್‌ವುಡ್‌ಗೆ ಸಂಭ್ರ...