ಭಾರತ, ಜನವರಿ 31 -- ತನ್ನ ಸಹಜ ಸೌಂದರ್ಯದಿಂದಲೇ ಕುಂಭಮೇಳದಲ್ಲಿ ಸಾಕಷ್ಟು ಜನರ ಮನಗೆದ್ದ ರುದ್ರಾಕ್ಷಿ ಮಾರುವ ಯುವತಿ ಮೊನಾಲಿಸಾ, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿ ಇಡೀ ದೇಶದ ಗಮನ ಸೆಳೆದಿದ್ದರು. ಈ ಮೂಲಕ ಸಾಕಷ್ಟು ಜನರನ್ನು ತಲುಪಿದ ಮೊನಾಲಿಸಾಗೆ ಇದೀಗ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಗಲಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಎಲ್ಲ ವದಂತಿಗಳಿಗೆ ತೆರೆಬಿದ್ದಿದ್ದು, ಸುದ್ದಿ ಅಧಿಕೃತಗೊಂಡಿದೆ. 'ದಿ ಡೈರಿ ಆಫ್ ವೆಸ್ಟ್ ಬೆಂಗಾಲ್' ಎಂಬ ಸಿನಿಮಾದಲ್ಲಿ ಮೊನಾಲಿಸಾ ಅಭಿನಯಿಸಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಸಿನಿಮಾ ನಿರ್ಮಾಪಕ ಸನೋಜ್ ಮಿಶ್ರಾ ಮೊನಾಲಿಸಾ ಅವರ ಮನೆಗೆ ತೆರಳಿ ಅಲ್ಲಿಂದಲೇ ವಿಡಿಯೋ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಲನಚಿತ್ರ ನಿರ್ಮಾಪಕ ಸನೋಜ್ ಮಿಶ್ರಾ ಅವರು 'ದಿ ಡೈರಿ ಆಫ್ ವೆಸ್ಟ್ ಬೆಂಗಾಲ್' ಎಂಬ ಬಾಲಿವುಡ್ ಚಲನಚಿತ್ರದಲ್ಲಿ ಅಭಿನಯಿಸಲು ಮೊನಾಲಿಸಾ ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊದ ಮೂಲಕ ಕೆಲ ವಿಚಾರಗಳನ್ನು ಹಂಚಿಕೊಂಡಿದ್...