ಭಾರತ, ಏಪ್ರಿಲ್ 2 -- ಬೆಂಗಳೂರು: ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಂತರ ಕೃಷ್ಣಾ ನೀರಿನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದ್ದಾರೆ.

ಇದನ್ನೂ ಓದಿ: ಭುವನಗಿರಿ ರಾಯರ ಮಠದಲ್ಲಿ ವಿಷ್ಣು ಸಹಸ್ರನಾಮ ಮಹಾಯಜ್ಞ; ಸಾಮೂಹಿಕ ಪಾರಾಯಣ ಅಭಿಯಾನದಲ್ಲಿ ನೀವೂ ಪಾಲ್ಗೊಳ್ಳಬಹುದು

ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದಿದ್ದಾರೆ. ...