ಭಾರತ, ಫೆಬ್ರವರಿ 21 -- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಭರ್ಜರಿ ಆರಂಭ ಪಡೆದಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 6 ವಿಕೆಟ್​ಗಳಿಂದ ಸೋಲಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ 2 ಸಂಪಾದಿಸಿ 2ನೇ ಸ್ಥಾನ ಗಳಿಸಿರುವ ರೋಹಿತ್​ ಪಡೆ ಇದೀಗ ಫೆಬ್ರವರಿ 23ರಂದು ಬದ್ಧವೈರಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಈ ಬ್ಲಾಕ್​ಬಸ್ಟರ್​ ಮುಖಾಮುಖಿಯಲ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿ ವಿರುದ್ಧವೂ ಗೆಲುವಿನ ಓಟ ಮುಂದುವರೆಸುವ ವಿಶ್ವಾಸದಲ್ಲಿದೆ. ಸೆಮಿಫೈನಲ್‌ಗೆ ತಮ್ಮ ಹಾದಿಯನ್ನು ಇನ್ನಷ್ಟು ಸುಗಮಗೊಳಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಅದಕ್ಕಾಗಿ, ಭಾರತವು ಪಾಕಿಸ್ತಾನದ ವಿರುದ್ಧ ತಮ್ಮ ಅತ್ಯುತ್ತಮ ಪ್ಲೇಯಿಂಗ್ XI ಕಣಕ್ಕಿಳಿಸಲು ತಯಾರಿ ನಡೆಸಿದೆ. ವರದಿಗಳ ಪ್ರಕಾರ ಒಂದು ಬದಲಾವಣೆ ಸಾಧ್ಯತೆ ಇದೆ.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತನ್ನ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಮಾ...