Bangalore, ಮೇ 3 -- ಕೃಷ್ಣಾ ನದಿ ನೀರು ಹಂಚಿಕೆ ವಿಚಾರವಾಗಿ ಕೃಷ್ಣಾ ನ್ಯಾಯಾಧೀಕರಣದ ಮೂಲಕ ಕರ್ನಾಟಕದ ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವುದೂ ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕೃಷ್ಣಾ ನ್ಯಾಯಾಧೀಕರಣ- ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧರಿಸಲಾಯಿತು.
ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.