ಭಾರತ, ಮಾರ್ಚ್ 20 -- ದೆಹಲಿ: ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮಾಡಲು ಕರ್ನಾಟಕಕ್ಕೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ, ಸುಪ್ರೀಂ ಕೋರ್ಟ್ ಗೆ ಅಂತರಾಜ್ಯ ಜಲ ವಿವಾದದ ಕಾನೂನಿನ ಬಗ್ಗೆ ಸ್ಪಷ್ಟವಾಗಿ ತಿಳಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಸಂಸತ್ತಿನಲ್ಲಿ ಜಲಶಕ್ತಿ ಇಲಾಖೆಯ ಬೇಡಿಕೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ನ್ಯಾಯ ಮಂಡಳಿ ಆದೇಶವಾಗಿ 15 ವರ್ಷ ಕಳೆದಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣಾ ರಾಜ್ಯಗಳ ನಡುವಿನ ನೀರಿನ ಹಂಚಿಕೆ ಗೊಂದಲದಿಂದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ, ಸುಪ್ರೀಂ ಕೋರ್ಟ್ ಗೆ ಅಂತರಾಜ್ಯ ಜಲ ವಿವಾದದ ಕಾನೂನಿನ ಬಗ್ಗೆ ಸ್ಪಷ್ಟವಾಗಿ ತಿಳಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಅವಕಾಶ ಕಲ್ಪಿಸಿಕೊಡಬೇಕು ಒ...