Mandya, ಏಪ್ರಿಲ್ 25 -- ಮಂಡ್ಯ: ಈಗಾಗಲೇ ಉತ್ತರ ಭಾರತದಲ್ಲಿ ಜನಪ್ರಿಯವಾಗಿರುವ ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ. ಕಾವೇರಿ ಆರತಿಯನ್ನು(KRS Cauvery Aarti) ಒಂದೇ ಬಾರಿಗೆ 10ಸಾವಿರ ಜನರು ನೋಡುವ ವ್ಯವಸ್ಥೆಯನ್ನು ಮಾಡಲಾಗುವುದು ವಾರದಲ್ಲಿ ಎಷ್ಟು ದಿನ ಕಾವೇರಿ ಆರತಿ ಮಾಡಬೇಕು ಎಂಬುದರ ಬಗ್ಗೆ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲೂ ಮತ್ತೊಂದು ಸಭೆ ಮಾಡಿ ತೀರ್ಮಾನ ಕೈಗೊಳ್ಳಲು ಕೂಡ ನಿರ್ಧರಿಸಲಾಗಿದೆ. ಪ್ರವಾಸಿಗರನ್ನು ಆಕರ್ಷಿಸಿ ಕೆಆರ್‌ಎಸ್‌ ಭಾಗದಲ್ಲಿ ಇನ್ನಷ್ಟು ಮಂದಿಗೆ ಉದ್ಯೋಗ ಲಭ್ಯವಾಗುವಂತೆ ಮಾಡುವ ಉದ್ದೇಶವನ್ನೂ ಈ ಯೋಜನೆ ಹೊಂದಿದೆ. ಕೆ ಆರ್ ಎಸ್ ಅಣೆಕಟ್ಟೆಯ ಸುತ್ತ ಭೇಟಿ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಥಳೀಯ ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ. ಕೆ. ಶಿವಕುಮಾರ್. ಸರ್ಕಾರದ ವತಿ...