Bangalore, ಮಾರ್ಚ್ 17 -- 18ನೇ ಆವೃತ್ತಿಯ ಐಪಿಎಲ್​ಗೆ ಅಕ್ಷರ್​ ಪಟೇಲ್​ ಅವರನ್ನು ನಾಯಕನನ್ನಾಗಿ ಘೋಷಿಸಿದ ಕೆಲವೇ ದಿನಗಳ ನಂತರ ಡೆಲ್ಲಿ ಕ್ಯಾಪಿಟಲ್ಸ್ ಈಗ ಉಪನಾಯಕನನ್ನು ಪ್ರಕಟಿಸಿದೆ. ಆದರೆ, ಈ ಹೆಸರು ತಿಳಿದರೆ ಕೆಎಲ್ ರಾಹುಲ್ ಅಭಿಮಾನಿಗಳು ಖಂಡಿತವಾಗಿಯೂ ಆಘಾತಕ್ಕೊಳಗಾಗುತ್ತಾರೆ. ಕೆಎಲ್ ರಾಹುಲ್ ಅವರನ್ನು ಉಪನಾಯಕನ ಸ್ಥಾನಕ್ಕೂ ನಿರ್ಲಕ್ಷಿಸಲಾಗಿದೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರ್​​ಸಿಬಿ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಉಪನಾಯಕನನ್ನಾಗಿ ಟೀಮ್ ಮ್ಯಾನೇಜ್​ಮೆಂಟ್ ಘೋಷಿಸಿದೆ.

ಕಳೆದ ಮೂರು ಸೀಸನ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದ ಫಾಫ್ ಡು ಪ್ಲೆಸಿಸ್, ದಕ್ಷಿಣ ಆಫ್ರಿಕಾದ ನಾಯಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅಕ್ಷರ್​ಗೆ ಸಾರಥ್ಯ ವಹಿಸಿದ ಹಿನ್ನೆಲೆ ವೈಸ್ ಕ್ಯಾಪ್ಟನ್ಸಿ ಪಟ್ಟ ಕೆಎಲ್ ರಾಹುಲ್​ಗೆ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ನಿರೀಕ್ಷೆ ಹುಸಿ ಮಾಡಿದೆ. ಉಪನಾಯಕನ ಘೋಷಣೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಡೆಲ್ಲಿ ಬಿಡುಗಡ...