ಭಾರತ, ಏಪ್ರಿಲ್ 7 -- ಐಪಿಎಲ್‌ 18ನೇ ಆವೃತ್ತಿಯಲ್ಲಿ ಏಪ್ರಿಲ್‌ 8ರ ಮಂಗಳವಾರ ಡಬಲ್‌ ಧಮಾಕಾ. ಮಂಗಳವಾರದಂದು ಎರಡು ಪಂದ್ಯಗಳು ನಡೆಯುತ್ತಿವೆ. ಟೂರ್ನಿಯ 21ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ದಿನದ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಎದುರಾಗಲಿವೆ. ಕೆಕೆಆರ್‌ ಮತ್ತು ಲಕ್ನೋ ತಂಡಗಳ ನಡುವಿನ ಪಂದ್ಯವು ಏಪ್ರಿಲ್‌ 6ರ ಭಾನುವಾರವೇ ನಡೆಯಬೇಕಿತ್ತು. ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರಾಮನವಮಿ ಹಿನ್ನೆಲೆಯಲ್ಲಿ ಪಂದ್ಯವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

ಎಸ್‌ಆರ್‌ಎಚ್‌ ವಿರುದ್ಧದ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಕೆಕೆಆಆರ್‌ ತಂಡವು, ಪ್ರಸಕ್ತ ಋತುವಿನಲ್ಲಿ ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡ ಕೂಡಾ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಗೆ...