ಕೋಲ್ಕತ್ತಾ, ಮಾರ್ಚ್ 21 -- ಮಾರ್ಚ್ 22 ರಿಂದ ಐಪಿಎಲ್ 2025 ಪ್ರಾರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳ ಕಾಯುವಿಕೆ ಕೊನೆಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಆದಾಗ್ಯೂ, ಮಳೆಯು ಅಭಿಮಾನಿಗಳ ಉತ್ಸಾಹವನ್ನು ಹಾಳು ಮಾಡಬಹುದು. ಕೋಲ್ಕತ್ತಾದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಉದ್ಘಾಟನಾ ಪಂದ್ಯ ರದ್ದಾದರೂ ಅಚ್ಚರಿ ಇಲ್ಲ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡಿದ್ದು, ಮಾರ್ಚ್ 22ರ ತನಕ ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. 'ಬಂಗಾಳಕೊಲ್ಲಿಯಿಂದ ಕೆಳ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತ ಕಾಣಿಸಿಕೊಳ್ಳಲಿದ್ದು, ಮಾರ್ಚ್ 20 ಮತ್ತು 22 ರವರೆಗೆ ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳು ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸ...