ಭಾರತ, ಜೂನ್ 17 -- ಬೆಂಗಳೂರು: ಕೆಲಸ ಕೊಟ್ಟ ಮನೆ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳಿಯನ್ನು ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಗಾಳಿಪುರದ ನಿವಾಸಿ ಉಮಾ (43) ಬಂಧಿತ ಆರೋಪಿ. ಈಕೆ ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿ ರೂ.67 ಲಕ್ಷ ನಗದು ಹಾಗೂ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳ್ಳತನ ಮಾಡಿದ್ದಳು.

ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿ ಈಕೆಯಿಂದ 57.50 ಲಕ್ಷ ನಗದು, ರೂ.12.65 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಚಾಮರಾಜಪೇಟೆಯ ನಿವಾಸಿ, ಉದ್ಯಮಿ ರಾಧಾ ಅವರು ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ದೂರು ನೀಡಿದ್ದರು. ಈ ದೂರಿನನ್ವಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಉದ್ಯಮಿ ರಾಧಾ ಅವರು ನಗರ್ತಪೇಟೆಯಲ್ಲಿ ಸೆಕ್ಯುರಿಟಿ ಏಜೆನ್ಸಿ ನಡೆಸುತ್ತಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿ ಸುಜಾತಾ ಅವರ ಆರೈಕೆಗೆಂದು ಮೂರು ತಿಂಗಳ ಹಿಂದೆ ಆರೋಪಿ ಉಮಾ ಅವರನ್ನು ನೇಮಕ ಮ...