ಭಾರತ, ಜನವರಿ 26 -- ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್​ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ (Union Budget) ಅನುದಾನ ನೀಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ಪತ್ರ ಬರೆದಿದ್ದಾರೆ. ಮುಂಬರುವ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಆಯವ್ಯಯದಲ್ಲಿ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

'ಬೆಂಗಳೂರು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಪ್ರಗತಿ ಹಾಗೂ ಬಂಡವಾಳ ಹೂಡಿಕೆ ಆಕರ್ಷಣೆಯ ತಾಣವಾಗಿ ಬೆಳೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಂಡಿದೆ. ದೇಶದ ಯುವಕರಿಗೆ...