ಭಾರತ, ಫೆಬ್ರವರಿ 1 -- Agriculture budget 2025: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆ1) ಸಂಸತ್ತಿನಲ್ಲಿ 8ನೇ ಸಲ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಈ ಕೇಂದ್ರ ಬಜೆಟ್ 2025 ಮುಖ್ಯವಾಗಿ 10 ಆದ್ಯತಾ ವಲಯಗಳ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು. ಇದೇ ವೇಳೆ, ಕೃಷಿ ಕ್ಷೇತ್ರವೇ ಈ ಸಲದ ಎಂಜಿನ್ ಎಂದು ಹೇಳಿದರು.

ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನಾ ಜಾರಿಗೊಳಿಸಲಾಗುತ್ತಿದ್ದು, ಇದು ದೇಶದ ಕಡಿಮೆ ಉತ್ಪಾದಕತೆ ಹೊಂದಿದ 100 ಜಿಲ್ಲೆಗಳಿಗಾಗಿ ರೂಪಿಸಲಾಗಿದೆ. ಕೃಷಿ ಉತ್ಪಾದಕತೆ ಮತ್ತು ಪಂಚಾಯತ್ ಮಟ್ಟದಲ್ಲಿ ಶೇಖರಣೆಯನ್ನು ಹೆಚ್ಚಿಸುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಈ ಯೋಜನೆಯು 1.7 ಕೋಟಿ ಕೃಷಿಕರಿಗೆ ಸಹಕಾರಿಯಾಗಲಿದ್ದು, ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದು ಕೃಷಿಕರ ಆದಾಯ ವೃದ್ಧಿ ಮತ್ತು ಕೃಷಿ ಉತ್ಪಾದನೆ ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ ಎಂದು ಅವರು ವಿವರಿಸಿದರು.

ಕೃಷಿ ಕ್ಷೇತ್ರದಲ್...