ಭಾರತ, ಫೆಬ್ರವರಿ 1 -- ಬೆಂಗಳೂರು (ಫೆಬ್ರವರಿ 1): ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯ ಎರಡನೇ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ದಾಖಲೆಯ 8ನೇ ಕೇಂದ್ರ ಬಜೆಟ್​ ವಿರುದ್ಧ ಕರ್ನಾಟಕದ ಸಚಿವರು ಟೀಕಾ ಪ್ರಹಾರ ನಡೆಸಿದ್ದಾರೆ. ಆಯವ್ಯಯದಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ಈ ಬಜೆಟ್ ರೈತರು ಮತ್ತು ಸಾಮಾನ್ಯ ಜನರ ವಿರುದ್ಧವಾಗಿದೆ ಎಂದು ಸಚಿವರಾದ ಗೃಹ ಸಚಿವ ಜಿ ಪರಮೇಶ್ವರ, ಲಕ್ಷ್ಮಿ ಹೆಬ್ಬಾಳ್ಕರ್​, ಕೃಷ್ಣ ಬೈರೇಗೌಡ, ಈಶ್ವರ್​ ಖಂಡ್ರೆ ಸೇರಿದಂತೆ ಎಲ್ಲಾ ಸಚಿವರು ಕಿಡಿಕಾರಿದ್ದಾರೆ.

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನ ಪಡೆದಿರುವ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ದಕ್ಷಿಣ ಭಾಗದ ರಾಜ್ಯಗಳ ಜನರ ತೆರಿಗೆಯ ಸಂಪತ್ತನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಸುರಿಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸ...