ಭಾರತ, ಫೆಬ್ರವರಿ 1 -- Budget 2025: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ (ಫೆ 1) ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025 ಮಂಡಿಸುತ್ತ, ಕೇಂದ್ರ ಸರ್ಕಾರವು ಕೈಗೊಳ್ಳಲಿರುವ ಅಭಿವೃದ್ಧಿ ಕ್ರಮಗಳನ್ನು ಪ್ರಸ್ತಾಪಿಸಿದ್ದು, ಬಡವರು, ಯುವಕರು, ರೈತರು ಮತ್ತು ಮಹಿಳೆಯರು ಸೇರಿ 10 ಮುಖ್ಯ ಅಂಶಗಳ ಮೇಲೆ ಈ ಸಲದ ಬಜೆಟ್ ಗಮನ ಕೇಂದ್ರೀಕರಿಸಿದೆ ಎಂದು ವಿವರಿಸಿದರು.

ಸತತ ಎಂಟನೇ ಬಜೆಟ್ ಅನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಧ್ಯಮ ವರ್ಗದ ಖರ್ಚು ಮಾಡುವ ಶಕ್ತಿಯನ್ನು ಹೆಚ್ಚಿಸುವುದು, ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸುವುದು ಮತ್ತು ಬೆಳವಣಿಗೆಯನ್ನು ಬಲಪಡಿಸಲು ಖಾಸಗಿ ಹೂಡಿಕೆಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುತ್ತದೆ ಎಂದು ಹೇಳಿದರು. ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತವು ನಾಲ್ಕು ವರ್ಷಗಳಲ್ಲಿ ನಿಧಾನಗತಿಯ ಬೆಳವಣಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಕಳೆದ 10 ವರ್ಷಗಳ ಸರ್ಕಾರದ ಅಭಿವೃದ್ಧಿ ದಾಖಲೆ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನ ಸೆಳೆದಿವೆ ಎಂದು...