ಭಾರತ, ಜನವರಿ 31 -- Union Budget 2025 Session: ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನ ಶುರುವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದು, ಉತ್ತರ ಪ್ರದೇಶದ ಮಹಾಕುಂಭದಲ್ಲಿ ಬುಧವಾರ ನಡೆದ ಕಾಲ್ತುಳಿತದ ಬಗ್ಗೆ ಸಂತಾಪ ಸೂಚಿಸಿದರು. ಬುಧವಾರ ಈ ದುರಂತ ಸಂಭವಿಸಿತ್ತು. ನಂತರ ಭಾರತ ಸರ್ಕಾರ ಕೈಗೊಂಡ ಅನೇಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿದರು. ಅವುಗಳ ಪರಿಣಾಮಗಳನ್ನು ಉಲ್ಲೇಖಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಎಐ ಮಿಷನ್‌ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು

"ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಐತಿಹಾಸಿಕ ಮಹಾ ಕುಂಭ ನಡೆಯುತ್ತಿದೆ. ಇದು ನಮ್ಮ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಸಾಮಾಜಿಕ ಜಾಗೃತಿಗಳ ಹಬ್ಬವಾಗಿದೆ. ಪವಿತ್ರ ಹಬ್ಬದಲ್ಲಿ ಮೌನಿ ಅಮಾವಾಸ್ಯೆ ಮತ್ತು ಬುಧವಾರ ಸಂಭವಿಸಿದ ದುರಂತದ ಬಗ್ಗೆ ಸಂತಾಪವಿದೆ. ಗಾಯಗೊಂಡವರ ತ್ವರಿತ ಚೇತರಿಕೆಗಾಗಿ ಪ್ರಾರ್ಥಿಸುವುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಕಳೆದ ವರ್ಷ ಡಿಸೆಂಬರ್ 26 ರ...