ಭಾರತ, ಜನವರಿ 31 -- PM Modi on Budget 2025: ಕೇಂದ್ರ ಬಜೆಟ್ ಅಧಿವೇಶನ ಇಂದು (ಜನವರಿ 31) ಶುರುವಾಗುತ್ತಿದ್ದು, ಅದರಲ್ಲಿ ಪಾಲ್ಗೊಳ್ಳುವುದಕ್ಕಾಗಿ ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತ, ಪ್ರಜಾಪ್ರಭುತ್ವ, ವಿಕಸಿತ ಭಾರತ ಮತ್ತು ಬಡ ಮಧ್ಯಮ ವರ್ಗದ ಜನರ ಹಿತದೃಷ್ಟಿ ಕುರಿತು ಮಾತನಾಡಿದರು. ಮಾತು ಆರಂಭಿಸುತ್ತಿದ್ದಂತೆ, ಯಾವುದೇ ಶುಭ ಫಲಕ್ಕಾಗಿ ನಾವು ಮಹಾಲಕ್ಷ್ಮಿಯನ್ನು ಪ್ರಾರ್ಥಿಸುವುದು ಸಾಮಾನ್ಯ ಎಂದು ಹೇಳುತ್ತ, "ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ | ಮಂತ್ರ-ಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋಸ್ತುತೇ" ಸಾಲುಗಳನ್ನು ಪಠಿಸಿದರು.

"ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ನಾನು ಸಂಪತ್ತು ಮತ್ತು ಸಮೃದ್ಧಿಯ ದೇವತೆ ಲಕ್ಷ್ಮಿ ದೇವಿಗೆ ನಮಸ್ಕರಿಸುತ್ತೇನೆ. ಲಕ್ಷ್ಮಿ ದೇವಿಯು ನಮ್ಮ ದೇಶದ ಬಡ ಮತ್ತು ಮಧ್ಯಮ ವರ್ಗದವರನ್ನು ಆಶೀರ್ವದಿಸುವುದನ್ನು ಮುಂದುವರಿಸಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಪ್ರಜಾಪ್ರಭುತ್ವ ರಾಷ್ಟ್ರ...