Kottur, ಮೇ 3 -- ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಗ್ರಾಮದ ಐತಿಹಾಸಿಕ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಪ್ರಮುಖ ಬೀದಿಗಳಲ್ಲಿ ನೆರವೇರಿತು,
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಸಹಿತ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಮರುಳ ಸಿದ್ದೇಶ್ವರರ ರಥೋತ್ಸವದಲ್ಲಿ ಭಾಗಿಯಾದರು.ಸಾಮರಸ್ಯ, ಹಾಗೂ ಸಹೋದರತ್ವ ಬೆಸೆಯುವ ಇಂತಹ ರಥೋತ್ಸವಗಳು ನಮ್ಮ ಸಂಸ್ಕೃತಿಯ ನಿಜವಾದ ವೈಭವ. ಈ ಪವಿತ್ರ ರಥೋತ್ಸವದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ ಧನ್ಯರಾದರು
ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲರು ಕೂಡ ಉಜ್ಜಯಿನಿ ಶ್ರೀ ಮರುಳ ಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾದರು.
ಉಜ್ಜಯನಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ರಥ ಆಗಮಿಸಿದಾಗ ಭಕ್ತರು ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು.
ಉಜ್ಜಯಿನಿ ಪೀಠದ ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಕೊಟ್ಟೂರು ತಾಲ್ಲೂಕಿನ ಉಜ್ಜಿನಿ ಗ್ರಾಮದ ಐತಿಹಾಸಿಕ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.