Kodagu, ಮೇ 5 -- ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೇ 6, 7 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ( Cesc) ತಿಳಿಸಿದೆ.ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ ಮಾರ್ಗದಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅವರದಾಳು, ಕಣ್ಣಾರಳ್ಳಿ, ಕೊಡ್ಲಿಪೇಟೆ, ಬ್ಯಾಡಗೊಟ್ಟ, ನೀರುಗುಂದ, ಹೆಮ್ಮನೆ, ಬೆಸ್ಸೂರು, ಕಟ್ಟೆಪುರ, ನಿಲುವಾಗಿಲು, ಕೂಡ್ಲೂರು, ದೊಡ್ಡಬಂಡಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.