ಭಾರತ, ಏಪ್ರಿಲ್ 20 -- ಕೊನೆಗೂ ಲಯಕ್ಕೆ ಮರಳಿದ ರೋಹಿತ್ ಶರ್ಮಾ (76*) ಮತ್ತು ಸೂರ್ಯಕುಮಾರ್ ಯಾದವ್ (68*) ಅವರ ಸ್ಫೋಟಕ ಅರ್ಧಶತಕ ಮತ್ತು ಅದ್ಭುತ ಫೀಲ್ಡಿಂಗ್ ಬಲದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇದು ಮುಂಬೈಗೆ ದಕ್ಕಿದ ಹ್ಯಾಟ್ರಿಕ್ ಗೆಲುವಾದರೆ, ಸಿಎಸ್ಕೆಗೆ ಒಟ್ಟಾರೆ 6ನೇ ಸೋಲು. ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಾದರೆ ಸಿಎಸ್ಕೆ ಉಳಿದ ಆರೂ ಪಂದ್ಯಗಳನ್ನು ಗೆಲ್ಲುವುದು ಅಗತ್ಯ.
ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 38ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ, ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಶಿವಂ ದುಬೆ (50) ಮತ್ತು ರವೀಂದ್ರ ಜಡೇಜಾ (53) ತಲಾ ಅರ್ಧಶತಕ ಸಿಡಿಸಿ ಮಿಂಚಿದರು. 177 ರನ್ ಗುರಿ ಬೆನ್ನಟ್ಟಿದ ಮುಂಬೈ 15.4 ಓವರ್ಗಳಲ್ಲೇ ಜಯಭೇರಿ ಬಾರಿಸಿತು. ರೋಹಿತ್, ಸೂರ್ಯ ಬಿರುಸಿನ ಬ್ಯಾಟಿಂಗ್ ನಡೆಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
Published by H...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.