Koppal, ಮೇ 4 -- ಕೊಪ್ಪಳ: ಉತ್ತರ ಕರ್ನಾಟಕದ ಪ್ರಮುಖ ಜಾತ್ರೆಗಳಲ್ಲಿ ಒಂದಾದ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್‌ ಹುಲಿಗಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ 2025ನೇ ಸಾಲಿನ ಜಾತ್ರಾ ಮಹೋತ್ಸವವು ಮೇ 13 ರಿಂದ 24ರವರೆಗೆ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಈ ಜಾತ್ರಾ ಮಹೋತ್ಸವವು ಒಂದು ತಿಂಗಳ ಕಾಲ ಜರುಗಲಿದ್ದು, ಕರ್ನಾಟಕದ ನಾನಾ ಭಾಗಗಳು ಮಾತ್ರವಲ್ಲದೇ ಆಂಧ್ರ, ತೆಲಗಾಂಣ, ಮಹಾರಾಷ್ಟ್ರ ಹಾಗೂ ಇನ್ನಿತರೆ ಪ್ರದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಿ ದರ್ಶನವನ್ನು ಪಡೆಯಲು ಆಗಮಿಸಲಿದ್ದಾರೆ. ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2025ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಮಹಾರಥೋತ್ಸವ ಮೇ 21 ರಂದು ಸಂಜೆ 5.30ಕ್ಕೆ ನಡೆಯಲಿದೆ. ಜಾತ್ರೆಯ ಪ್ರಯುಕ್ತ ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಭಾಗವಾಗಿ ವಿವಿಧ ಧಾರ್ಮಿಕ ಚಟುವಟಿಕೆಗಳು ಮೇ 13 ರಿಂದ ಪ್ರಾರಂಭವಾಗಲಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ...