Koppal, ಮೇ 14 -- ಕೊಪ್ಪಳ: ಕೊಪ್ಪಳ ವತಿಯಿಂದ ತೋಟಗಾರಿಕೆ ಇಲಾಖೆ 9ನೇ ವರ್ಷದ ಮಾವು ಮೇಳ ಆರಂಭಗೊಂಡಿದೆ. ಮೇ 13 ರಿಂದ ಮೇ 22ರ ವರೆಗೆ 10 ದಿನಗಳ ಕಾಲ ಕೊಪ್ಪಳ ತೋಟಗಾರಿಕೆ ಇಲಾಖೆ ಕಛೇರಿಯ ಆವರಣದಲ್ಲಿ ಮೇಳ ನಡೆಯಲಿದೆ. ಬಗೆಬಗೆಯ ಮಾವಿನ ಹಣ್ಣುಗಳು ಗ್ರಾಹಕರನ್ನು ಮೇಳದಲ್ಲಿ ಆಕರ್ಷಿಸುತ್ತಿವೆ. ಈ ವರ್ಷವೂ ಪ್ರಪಂಚದ ಅತ್ಯಂತ ದುಬಾರಿ ಮಾವಿನ ಹಣ್ಣಾದ "ಮೀಯಾಜಾಕಿ" ಎಂಬ ಜಪಾನ ತಳಿಯ ಹಣ್ಣನ್ನು ಪ್ರದರ್ಶನಕ್ಕೆ ಇಡಲಾಗಿದೆ. ಈ ಮಾವಿನ ತಳಿಯ ಬೆಲೆಯು 1 ಕೆ.ಜಿ.ಗೆ ರೂ.2.50 ಲಕ್ಷ ಬೆಲೆ ಬಾಳುತ್ತದೆ. ಈ ಮೇಳದಲ್ಲಿ ಮಿಯಾಜಾಕಿ ಹಣ್ಣಿನ ಗಿಡಗಳನ್ನು ಬೆಳೆಯಲು ಆಸಕ್ತಿ ಇರುವ ರೈತರಿಗೆ ಗುಣಮಟ್ಟ ಗಿಡಗಳನ್ನು ಸಹ ಮಾರಾಟ ಮಾಡಲಾಗುತ್ತಿದೆ. ಇದಲ್ಲದೇ ಕೊಪ್ಪಳ ಕೇಸರ್ ಮಾವು ಬ್ರಾಂಡ್‌ನ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಸಾರ್ವಜನಿಕರಿಗೆ ಬಾಕ್ಸ್ನಲ್ಲಿನ ಹಣ್ಣುಗಳನ್ನು ಸಿಗುವಂತೆ ಅನುಕೂಲ ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 6000 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣಿನ ಬೆಳೆಗಳನ್ನು ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.