Coimbatore, ಏಪ್ರಿಲ್ 11 -- ಕೊಯಮತ್ತೂರು: ತಮಿಳುನಾಡು ಕೊಯಮತ್ತೂರು ಜಿಲ್ಲೆ ಪೊಲ್ಲಾಚಿಯ ಖಾಸಗಿ ಶಾಲೆಯಲ್ಲಿ ಮುಟ್ಟಾದ ವಿದ್ಯಾರ್ಥಿನಿಯನ್ನು 8ನೇ ತರಗತಿ ಹೊರಗೆ ಕೂರಿಸಿ ವಾರ್ಷಿಕ ಪರೀಕ್ಷೆ ಬರೆಸಿದ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಶನಿವಾರ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ಈ ಅಮಾನವೀಯ, ಸಂವೇದನಾ ರಹಿತ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಕೂಡಲೇ ಕಾರ್ಯಪ್ರವತ್ತವಾಗಿರುವ ಶಾಲಾ ಶಿಕ್ಷಣ ಇಲಾಖೆ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ಗುರುವಾರ ಹೇಳಿದೆ.
ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಬಾಲಕಿಯನ್ನು ಶನಿವಾರ ಶಾಲಾ ತರಗತಿ ಹೊರಗೆ ಕೂರಿಸಿ ಪರೀಕ್ಷೆ ಬರೆಸಲಾಗಿದ್ದ ವಿಡಿಯೊ ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದು ಪೊಲ್ಲಾಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೀಗಾಗಿ ಪೊಲೀಸರು ಕೂಡಲೇ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವಿವರಣೆ ಕೇಳಿದ್ದರು. ಇನ್ನೊಂದೆಡೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡುವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.