ಭಾರತ, ಏಪ್ರಿಲ್ 27 -- 26ಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರ ನಡುವೆಯೂ ಒತ್ತಡ ನಿಭಾಯಿಸಿ 119 ರನ್ಗಳ ಜೊತೆಯಾಟವಾಡಿದ ವಿರಾಟ್ ಕೊಹ್ಲಿ (51) ಮತ್ತು ಕೃನಾಲ್ ಪಾಂಡ್ಯ (73 ಅಜೇಯ) ಅವರ ಅದ್ಭುತ ಆಟದ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ತವರಿನ ಸೋಲಿಗೆ ಅವರದ್ದೇ ತವರಿನಲ್ಲಿ ಸೇಡು ತೀರಿಸಿಕೊಂಡಿದೆ. ಇದೀಗ ತವರಿನಾಚೆ ಸತತ 6 ಪಂದ್ಯಗಳನ್ನು ಗೆದ್ದಿರುವ ಆರ್ಸಿಬಿ ಇದೀಗ ಒಟ್ಟು 7 ಗೆಲುವಿನೊಂದಿಗೆ 14 ಅಂಕ ಪಡೆದು ಟೇಬಲ್ ಟಾಪರ್ ಆಗಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ, ಆರ್ಸಿಬಿ ಬೌಲರ್ಗಳ ದಾಳಿಗೆ ತತ್ತರಿಸಿತು. ಇದರ ನಡುವೆಯೂ 20 ಓವರ್ ಪೂರ್ಣಗೊಳಿಸಿದ ಡಿಸಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆ ಹಾಕಿತು. ಭುವನೇಶ್ವರ್ ಕುಮಾರ್ 3 ವಿಕೆಟ್, ಜೋಶ್ ಹೇಜಲ್ವುಡ್ 2 ವಿಕೆಟ್ ಪಡೆದು ಅಕ್ಷರ್ ಪಡೆಯನ್ನು ಕಟ್ಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.