Bengaluru, ಜನವರಿ 27 -- Shiva Rajkumar: ಕ್ಯಾನ್ಸರ್‌ ಚಿಕಿತ್ಸೆಗೆಂದು ಅಮೆರಿಕಾದ ಮಿಯಾಮಿಗೆ ತೆರಳಿದ್ದ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್‌, ಜನವರಿ 26ರ ಗಣರಾಜ್ಯೋತ್ಸವದ ದಿನದಂದೇ ಬೆಂಗಳೂರಿಗೆ ಮರಳಿದ್ದಾರೆ. ಏರ್‌ಪೋರ್ಟ್‌ನಲ್ಲಿಯೇ ಅವರ ಅಭಿಮಾನಿ ಬಳಗದಿಂದ ಅದ್ಧೂರಿ ಸ್ವಾಗತ ಪಡೆದಿದ್ದ ಶಿವಣ್ಣ ಸದ್ಯ ಒಂದಷ್ಟು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಮುಂದಿನ ಒಂದು ತಿಂಗಳ ಬಳಿಕ ಮತ್ತೆ ಹಳೇ ಲಯಕ್ಕೆ ಮರಲುವುದಾಗಿ ಹೇಳಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ, ಶಿವಣ್ಣ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ನಾಗವಾರದಲ್ಲಿರುವ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಒಂದಷ್ಟು ಹೊತ್ತು ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯ...