Bangalore, ಮಾರ್ಚ್ 14 -- ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರಮುಖ ವಿಶ್ವವಿದ್ಯಾಲಯಗಳನ್ನು ವಿಭಜಿಸಿ ಹೊಸದಾಗಿ ರೂಪಿಸಿದ ಒಂಬತ್ತು ವಿಶ್ವವಿದ್ಯಾಲಯಗಳ ಭವಿಷ್ಯ ಹೊಯ್ದಾಟ ಶುರುವಾಗಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದ ಉಪಸಮಿತಿ ಮುಚ್ಚುವ ಕುರಿತು ಪ್ರಸ್ತಾಪಿಸಿದ್ದರೆ, ಬಿಜೆಪಿ ಇದನ್ನು ಪ್ರಬಲವಾಗಿ ವಿರೋಧಿಸುತ್ತಿದೆ. ಕರ್ನಾಟಕದ ವಿಧಾನಮಂಡಲ ಅಧಿವೇಶನದಲ್ಲೂ ಈ ಕುರಿತು ಚರ್ಚಗಳು ನಡೆದಿವೆ. ಇದರ ನಡುವೆಯೇ ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.

ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದ ಸಿಎಂ, ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಒ ಸಮಿತಿ ವರದಿ ಕೊಡುವುದು ಬಾ...