ಭಾರತ, ಮೇ 13 -- ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025 ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಜೊತೆಗೆ ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಗೂ ಇದೇ ತಂಡವನ್ನು ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ ನಡುವಿನ ಪ್ರಶಸ್ತಿ ಸುತ್ತಿನ ಪಂದ್ಯ ನಡೆಯಲಿದೆ. ಜೂನ್ 11 ರಿಂದ 15ರ ತನಕ ಐತಿಹಾಸಿಕ ಲಾರ್ಡ್ಸ್ನಲ್ಲಿ ಐತಿಹಾಸಿಕ ಪಂದ್ಯ ಜರುಗಲಿದೆ. ಬಲಿಷ್ಠ ತಂಡವನ್ನೇ ಪ್ರಕಟಿಸಿರುವ ಆಸೀಸ್, ಸತತ ಎರಡನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.
ಹಿಂದಿನ ಶ್ರೀಲಂಕಾ ಪ್ರವಾಸ ತಪ್ಪಿಸಿಕೊಂಡಿದ್ದ ಜೋಶ್ ಹೇಜಲ್ವುಡ್ ಮತ್ತು ನಾಯಕ ಪ್ಯಾಟ್ ಕಮಿನ್ಸ್ ತಂಡಕ್ಕೆ ಮರಳಿದ್ದಾರೆ. ಗಾಯದಿಂದ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ಶ್ರೀಲಂಕಾ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದ ಕ್ಯಾಮರೂನ್ ಗ್ರೀನ್ ಕೂಡ ತಂಡಕ್ಕೆ ಮರಳಿದ್ದಾರೆ. ಭಾರತ ವಿರುದ್ಧ ಚೊಚ್ಚಲ ಪಂದ್ಯವಾಡಿದ ಸ್ಯಾಮ್ ಕಾನ್ಸ್ಟಾಸ್ ತಮ್ಮ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.