ಭಾರತ, ಏಪ್ರಿಲ್ 23 -- ಕಾಶ್ಮೀರದ ಪಹಲ್‌ಗಾಮ್‌ ಪ್ರದೇಶದಲ್ಲಿ ಮಂಗಳವಾರ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕನಿಷ್ಠ 24 ಜನರನ್ನು ಸಾವನ್ನಪ್ಪಿದ್ದಾರೆ. ಈ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ದಾಳಿ ಹಿಂದಿರುವವರನ್ನು ಹುಟ್ಟಡಗಿಸಿ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿದ್ದಾರೆ. ಈ ನಡುವೆ ಸಿನಿಮಾ ಸೆಲೆಬ್ರಿಟಿಗಳೂ ಸಹ ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ರವಾನಿಸಿದ್ದಾರೆ. ತ್ವರಿತ ಕ್ರಮಕ್ಕೆ ಮುಂದಾಗಿ ಎಂದು ಪ್ರಧಾನಿ ಮೋದಿ ಬಳಿ ವಿನಂತಿಸಿದ್ದಾರೆ.

ಈ ಬಗ್ಗೆ ನಟ ಶಿವರಾಜ್‌ಕುಮಾರ್‌ ಸಹ ಪೋಸ್ಟ್‌ ಹಂಚಿಕೊಂಡಿದ್ದಾರೆ. "ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರ...