Bengaluru, ಮಾರ್ಚ್ 20 -- ಬೆಂಗಳೂರು: ಬೆಂಗಳೂರು ಮಹಾನಗರದ ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳು ಎಂದು ಘೋಷಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಅಧಿಕಾರ ನೀಡುವ 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ'ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ. ಈ ಮೊದಲು ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳನ್ನಾಗಿ ಪರಿವರ್ತಿಸಲು ಖಾಸಗಿ ಆಸ್ತಿಗಳ ಮಾಲೀಕರ ಒಪ್ಪಿಗೆ ಪಡೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಹೊಸ ಕಾಯಿದೆ ಪ್ರಕಾರ ಬಿಬಿಎಂಪಿ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ವಿಧೇಯಕದ ಪ್ರಕಾರ ವಲಯ ಆಯುಕ್ತರು ತಾವಾಗಿಯೇ ನಿರ್ಧಾರ ಕೈಗೊಳ್ಳಬಹುದು ಇಲ್ಲವೇ ಖಾಸಗಿ ಆಸ್ತಿಗಳ ಮಾಲೀಕರು ಮನವಿ ಸಲ್ಲಿಸಿದರೆ ಕ್ರಮ ಕೈಗೊಳ್ಳಬಹುದಾಗಿದೆ. ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಎಂದು ಘೋಷಿಸುವುದಕ್ಕೂ ಮುನ್ನ ಪಬ್ಲಿಕ್ ನೋಟಿಸ್ ಮತ್ತು ಖಾಸಗಿ ಆಸ್ತಿಗಳ ಮಾಲೀಕರಿಗೆ ನೋಟಿಸ್ ನೀಡಬೇಕಾಗಿರುತ್ತದೆ.
ಖಾಸಗಿ ರಸ್ತೆಯಲ್ಲಿ ರಸ್ತೆ ಬದಿಯ ಚರಂಡಿ ಸೇರಿ ಯಾವುದೇ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.