ಭಾರತ, ಮಾರ್ಚ್ 8 -- ಕೊಪ್ಪಳ: ಭಾರತ ಪ್ರವಾಸಕ್ಕೆಂದು ಗುಂಪಿನೊಂದಿಗೆ ಬಂದಿದ್ದ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ ಮಾತ್ರವಲ್ಲದೆ, ಜತೆಗಿದ್ದ ಪ್ರವಾಸಿಗರ ಮೇಲೆ ದಾಳಿ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆಸಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಸಾಣಾಪುರ ಎಂಬಲ್ಲಿ ಘಟನೆ ನಡೆದಿದೆ. ಪ್ರವಾಸಿಗರ ಮೇಲೆ ದಾಳಿ ಮಾಡಲು ಮುಂದಾದಾಗ ಮೂವರು ನಾಲೆಗೆ ಹಾರಿದ್ದಾರೆ. ಇಬ್ಬರು ಈಜಿ ದಡ ಸೇರಿದರೆ ಇನ್ನೊಬ್ಬಾತ ಮೃತಪಟ್ಟಿದ್ದರು. ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಇಬ್ಬರನ್ನು ಸೆರೆ ಹಿಡಿಯಲಾಗಿದೆ.

ಘಟನೆ ನಡೆದ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೊಪ್ಪಳ ಪೊಲೀಸರು ಎರಡು ತಂಡಗಳನ್ನು ರಚಿಸಿದ್ದರು. ಅದರಂತೆ ಇಂದು ಇಬ್ಬರನ್ನು ಹಿಡಿದಿದ್ದಾರೆ. ಮಲ್ಲೇಶ ಹಾಗೂ ಚೇತನಸಾಯಿ ಬಂಧನವಾಗಿದ್ದು, ಇನ್ನೊಬ್ಬನಿಗೆ ಹುಡುಕಾಟ ಮುಂದುವರೆದಿದೆ.

ನಾಲೆಯಲ್ಲಿ ಮೃತಪಟ್ಟ ಯುವಕನನ್ನು ಒಡ...