ಭಾರತ, ಮಾರ್ಚ್ 13 -- 2025ರ ಇಂಡಿಯನ್ ಪ್ರೀಮಿಯರ್ ಲೀಗ್​ಗೂ (IPL 2025) ಮುನ್ನ ಭಾರೀ ಆಘಾತಕ್ಕೆ ಒಳಗಾಗಿದ್ದ ರಾಜಸ್ಥಾನ್ ರಾಯಲ್ಸ್ (Rajasthan Royals) ಈಗ ನಿಟ್ಟುಸಿರು ಬಿಟ್ಟಿದೆ. ಹೆಡ್​ಕೋಚ್​ ರಾಹುಲ್ ದ್ರಾವಿಡ್ (Rahul Dravid) ಕಾಲಿಗೆ ಗಾಯಗೊಂಡಿದ್ದರ ಹೊರತಾಗಿಯೂ ಕಾಲಿಗೆ ಫ್ರಾಕ್ಚರ್ ಮತ್ತು ಬ್ಯಾಂಡೇಜ್ ಕಟ್ಟಿಕೊಂಡೇ ಆಟಗಾರರಿಗೆ ತರಬೇತಿ ಶಿಬಿರಕ್ಕೆ ಆಗಮಿಸಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ (Video Viral) ಆಗುತ್ತಿದೆ. ರಾಜಸ್ಥಾನ್ ರಾಯಲ್ಸ್ ತನ್ನ ಅಧಿಕೃತ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದೆ.

ಬೆಂಗಳೂರಿನಲ್ಲಿ ಜರುಗಿದ ಲೋಕಲ್ ಕ್ರಿಕೆಟ್ ಪಂದ್ಯವೊಂದರಲ್ಲಿ ಕಣಕ್ಕಿಳಿದಿದ್ದ ರಾಹುಲ್ ದ್ರಾವಿಡ್ ಕಾಲಿಗೆ ಗಾಯಗೊಂಡಿದ್ದರು. ಎಸ್‌ಎಲ್‌ಎಸ್ ಕ್ರಿಕೆಟ್ ಮೈದಾನದಲ್ಲಿ ಯಂಗ್ ಲಯನ್ಸ್ ಕ್ಲಬ್ ಎದುರಿನ 50 ಓವರ್‌ಗಳ ಪಂದ್ಯದಲ್ಲಿ ದ್ರಾವಿಡ್ ಮತ್ತು ಅವರ ಮಗ ಅನ್ವಯ್ ಅವರು ವಿಜಯ್ ಕ್ರಿಕೆಟ್ ಕ್ಲಬ್ (ಮಾಲೂರು) ಪ್ರತಿನಿಧಿಸಿದ್ದರು. ಈ ಕದನದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದ್ರಾವಿಡ್, 28 ಎಸೆತಕ್...