ಭಾರತ, ಮೇ 18 -- ಗುಜರಾತ್‌ ಟೈಟನ್ಸ್‌ ತಂಡವು ಐಪಿಎಲ್‌ 2025ರ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇಆಫ್‌ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಅದರದ್ದೇ ತವರಿನಲ್ಲಿ ಮಣಿಸಿದ ಶುಭ್ಮನ್‌ ಗಿಲ್‌ ನೇತೃತ್ವದ ಜಿಟಿ, ಪ್ರಸಕ್ತ ಆವೃತ್ತಿಯಲ್ಲಿ ತನ್ನ ಪ್ರಾಬಲ್ಯ ಮುಂದುವರೆಸಿದೆ. 10 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಜಿಟಿ ಪ್ಲೇಆಫ್‌ ಪ್ರವೇಶಿಸಿದ್ದು ಮಾತ್ರವಲ್ಲದೆ, ಆರ್‌ಸಿಬಿ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡವನ್ನು ಕೂಡಾ ಪ್ಲೇಆಫ್‌ಗೆ ಅರ್ಹತೆ ಪಡೆಯುವಂತೆ ಮಾಡಿದೆ. ಈ ಬಾರಿಯ ಟೂರ್ನಿಯಲ್ಲಿ ಈವರೆಗೆ ಆಡಿದ 12 ಪಂದ್ಯಗಳಲ್ಲಿ ಇದು ತಂಡದ 9ನೇ ಗೆಲುವಾಗಿದೆ. ಒಟ್ಟು‌ 18 ಅಂಕಗಳೊಂದಿಗೆ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಅತ್ತ ಈ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ಲೇಆಫ್‌ ಲೆಕ್ಕಾಚಾರ ತುಸು ಚಿಂತಾಜನಕವಾಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್‌, ಕೆಎಲ್‌ ರಾಹುಲ್‌ ಆಕರ್ಷಕ ಶತಕದ ನೆರವಿಂದ 199 ರನ್‌ ಗಳಿಸಿತು. 200 ರನ್‌ಗಳ ಬೃಹತ್‌ ಗುರಿ ಪಡೆದ ಟೈಟನ...