ಭಾರತ, ಫೆಬ್ರವರಿ 19 -- ಅಹಮದಾಬಾದ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಸ್ತ್ರೀರೋಗ ತಪಾಸಣೆ ಮತ್ತು ವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗಿದೆ. ಇದು ಈಗ ಎಲ್ಲೆಡೆ ವೈರಲ್‌ ಆಗಿದೆ. ಪ್ರಕರಣವು ಮಹಿಳೆಯರ ಗೌಪ್ಯತೆಯ ಬಗ್ಗೆ ದೊಟ್ಟ ಮಟ್ಟದ ಪ್ರಶ್ನೆ ಮೂಡಿಸಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಸಿಸಿಟಿವಿ ದೃಶ್ಯಗಳನ್ನು ಎಲ್ಲೆಡೆ ಹಂಚಲಾಗಿದ್ದು, ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.

ಪ್ರಕರಣ ಸಂಬಂಧ ರಾಜ್‌ಕೋಟ್ ಮತ್ತು ಅಹಮದಾಬಾದ್ ಸೈಬರ್ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯರು ಚಿಕಿತ್ಸೆ ಪಡೆಯುತ್ತಿರುವ ವಿಡಿಯೋಗಳನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದೆ. ಅಲ್ಲದೆ ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯಗಳು ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಇಡಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.

'ಮೇಘಾ ಎಂಬಿಬಿಎಸ್' ಎಂಬ ಹೆ...