ಭಾರತ, ಮೇ 30 -- ರೋಹಿತ್​ ಶರ್ಮಾ (81) ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ ಐಪಿಎಲ್ ಎಲಿಮಿನೇಟರ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ಮುಂಬೈ ಇಂಡಿಯನ್ಸ್​ 20 ರನ್​​ಗಳ ಅಮೋಘ ಗೆಲುವು ಸಾಧಿಸಿ 2ನೇ ಕ್ವಾಲಿಫೈಯರ್​​ಗೆ ಲಗ್ಗೆ ಇಟ್ಟಿದೆ. ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತಿದ್ದ ಪಂಜಾಬ್ ಕಿಂಗ್ಸ್​ ತಂಡವನ್ನು ಮುಂಬೈ ಎದುರಿಸಲಿದೆ. ಈ ಪಂದ್ಯ ಜೂನ್ 1ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಇಲ್ಲಿ ಗೆದ್ದ ತಂಡವು ಜೂನ್ 3ರಂದು ನಡೆಯಲಿರುವ ಫೈನಲ್​ಗೆ ಅರ್ಹತೆ ಪಡೆದುಕೊಳ್ಳಲಿದೆ.

ಮುಲ್ಲನ್​ಪುರದ ಮಹಾರಾಜ ಯಾದವೀಂದ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡವು ರೋಹಿತ್​ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ (81) ನಿಗದಿತ 20 ಓವರ್​​​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಟಿ ತಂಡವು ಸಾಯಿ ಸುದರ್ಶನ್ (80) ಹೋರಾಟದ ಹೊರತಾ...