ಭಾರತ, ಏಪ್ರಿಲ್ 18 -- ಐಪಿಎಲ್‌ 16ನೇ ಆವೃತ್ತಿಯ ಮೊದಲಾರ್ಧದ ಪಂದ್ಯಗಳು ಮುಕ್ತಾಯ ಹಂತಕ್ಕೆ ಬಂದಿವೆ. ಟೂರ್ನಿಯಲ್ಲಿ ನಾಳೆ (ಏಪ್ರಿಲ್‌ 19) ವಾರಾಂತ್ಯ ದಿನ ಆಗಿರುವುದರಿಂದ 2 ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ದಿನದ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಸಂಜೆ 7:30 ಪಂದ್ಯ ನಡೆಯಲಿದೆ.

ಗುಜರಾತ್‌ ಹಾಗೂ ಡೆಲ್ಲಿ ತಂಡಗಳು ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿವೆ. ಉಭಯ ತಂಡಗಳು ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲ 2 ಸ್ಥಾನಗಳನ್ನು ಪಡೆದಿದೆ. ಅತ್ತ ಎಲ್‌ಎಸ್‌ಜಿ ತಂಡ ಪಾಯಿಂಟ್‌ ಟೇಬಲ್‌ನಲ್ಲಿ ಐದನೇ ಸ್ಥಾನದಲ್ಲಿದ್ದರೆ, ಕೊನೆಯ 3 ಪಂದ್ಯಗಳಲ್ಲಿ ಸೋತ ರಾಜಸ್ಥಾನ 8ನೇ ಸ್ಥಾನ ಪಡೆದಿದೆ.

ದಿನದ ಎರಡೂ ಪಂದ್ಯಗಳು ...