ಭಾರತ, ಫೆಬ್ರವರಿ 25 -- ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಸರ್ಕಾರ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಸುತ್ತಿದೆ. ಹೀಗಾಗಿ ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಬೆಂಗಳೂರಿನ ಬೆಳಕು ಭವನದಲ್ಲಿ ಸೋಮವಾರ (ಫೆ.24) ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಮಾಹಿತಿ ನೀಡಿದ್ದಾರೆ.

ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ತಪ್ಪು ಕಲ್ಪನೆ ಸೃಷ್ಟಿಯಾಗಿದೆ. ಸರ್ಕಾರದ ಮುಂದೆ ಇಂತಹ ಯಾವುದೇ ಉದ್ದೇಶ ಇಲ್ಲ, ಎಂದು ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯುನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪ...