Bangalore, ಮೇ 22 -- ಬೆಂಗಳೂರು: ಕರ್ನಾಟಕದ ಪಂಚ ಗ್ಯಾರಂಟಿಗಳಲ್ಲಿ ಒಂದಾಗ ಗೃಹಲಕ್ಷ್ಮಿ ಯೋಜನೆ ಜಾರಿಗೊಂಡು ಎರಡು ವರ್ಷ ಕಳೆದಿದ್ದು. ಈಗ ಅದು ಗೃಹಲಕ್ಷ್ಮಿ ಸಂಘದ ರೂಪ ಪಡೆಯಲಿದೆ. ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವುದೇ ಉದ್ದೇಶವಾಗಿದೆ ಎನ್ನುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡುವ ವಿವರಣೆ.

ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ...